ಮುಂಬೈ- ಗಡಿ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರ ಬಹುಹಿಂದಿನಿಂದಲೂ ಉರಿಯೋ ಬೆಂಕಿಗೆ ತುಪ್ಪ ಸುರಿಯುತ್ತಲೇ ಇದೆ. ಸದ್ಯ ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿವಾದ ಭುಗಿಲೆದ್ದಿದೆ. ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿವೆ. ಇಂತ ಹೊತ್ತಲ್ಲಿ ಮಹಾರಾಷ್ಟ್ರ ಡಿಸಿಎಂ ಹಾಗೂ ಎನ್ ಸಿ ಪಿ ನಾಯಕ ಅಜಿತ್ ಪವಾರ್ ಉರಿಯೋ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡ್ತಿದ್ದಾರೆ.
ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕು. ಅದನ್ನು ನನಸು ಮಾಡಬೇಕಿದೆ ಎನ್ನುವ ಮೂಲಕ ಕನ್ನಡಾಭಿಮಾನಿಗಳನ್ನು ಕೆಣಕಿದ್ದಾರೆ.
ಶಿವಸೇನೆಯ ನಾಯಕ ದಿವಂಗತ ಬಾಳಾ ಠಾಕ್ರೆ ಪುಣ್ಯಸ್ಮರಣೆ ಅಂಗವಾಗಿ ಮಂಗಳವಾರ ಅಜಿತ್ ಪವಾರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಾರವಾರ, ಬೆಳಗಾವಿ, ಹಾಗೂ ನಿಪ್ಪಾಣಿ ಭಾಗದಲ್ಲಿ ಮರಾಠಿ ಮಾತನಾಡುವ ಭಾಷಿಕರು ಹೆಚ್ಚಾಗಿದ್ದು ಆ ಭಾಗಗಳು ಮಹಾರಾಷ್ಟ್ರಕ್ಕೆ ಸೇರಬೇಕು. ಇದು ಬಾಳಾ ಠಾಕ್ರೆ ಅವರ ಕನಸಾಗಿತ್ತು. ಅದನ್ನು ನನಸು ಮಾಡಬೇಕಿದೆ ಎಂದು ಮರಾಠಿಗರಿಗೆ ಕರೆ ನೀಡಿದ್ದಾರೆ.
PublicNext
18/11/2020 11:38 am