ಬೆಂಗಳೂರು- ಸದ್ಯ ಬಳ್ಳಾರಿ ಜಿಲ್ಲೆಯಲ್ಲಿರುವ ವಿಜಯನಗರ ಭಾಗದ ಜನರ ಬಹುಕಾಲದ ಬೇಡಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರವನ್ನು 31 ನೇ ಜಿಲ್ಲೆ ಹಾಗೂ ನೂತನ ಜಿಲ್ಲೆಯನ್ನಾಗಿ ಮಾಡುವ ನಿರ್ಧಾರಕ್ಕೆ ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿದೆ. ಅನೌಪಚಾರಿಕವಾಗಿ ಈ ಬಗ್ಗೆ ಚರ್ಚೆ ನಡೆಸಿ ನಿರ್ಧಾರಕ್ಕೆ ಬಂದಿದ್ದೇವೆ. ವಿಜಯನಗರ ಜಿಲ್ಲೆಯ ಕುರಿತಾದ ಸವಿವರಗಳನ್ನು ಮುಂದಿನ ಸಭೆಯಲ್ಲಿ ಚರ್ಚಿಸಿದ ಬಳಿಕ ನೀಡಲಾಗುವುದು ಎಂದು ಹೇಳಿದ್ದಾರೆ.
PublicNext
18/11/2020 12:01 pm