ಹೊಸದಿಲ್ಲಿ: ಬಿಹಾರ ಸೋಲಿನ ಹಿನ್ನೆಲೆಯಲ್ಲಿ ಇತ್ತೀಚೆಗೆ ಹೈಕಮಾಂಡ್ ವಿರುದ್ಧ ಹರಿಹಾಯ್ದಿದ್ದ ಹಿರಿಯ ನಾಯಕ ಕಪಿಲ್ ಸಿಬಲ್ ವಿರುದ್ಧ ಕಾಂಗ್ರೆಸ್ ನಾಯಕರು ತಿರುಗಿ ಬಿದ್ದಿದ್ದಾರೆ. ಕಪಿಲ್ ಸಿಬಲ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಲೋಕಸಭೆಯ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ, ಪಕ್ಷದ ವಿರುದ್ಧ ಅಸಮಾಧಾನವಿದ್ದರೆ ಕಪಿಲ್ ಸಿಬಲ್ ಅವರು ಬೇರೆ ಪಕ್ಷ ಸೇರಿಕೊಳ್ಳಲಿ ಅಥವಾ ತಮ್ಮದೇ ಸ್ವಂತ ಪಕ್ಷ ಕಟ್ಟಿಕೊಳ್ಳಲಿ ಎಂದು ಗುಡುಗಿದ್ದಾರೆ.
ಗಾಂಧಿ ಪರಿವಾರಕ್ಕೆ ಹತ್ತಿರವಿರುವ ಯಾವುದೇ ನಾಯಕರು ಪಕ್ಷವನ್ನು ಟೀಕಿಸಲು ಸ್ವತಂತ್ರರು. ಕಾಂಗ್ರೆಸ್‌ನ ಆಂತರಿಕ ಪ್ರಜಾಪ್ರಭುತ್ವ ಇದಕ್ಕೆ ಅವಕಾಶ ನೀಡಿದೆ. ಆದರೆ ಬಹಿರಂಗವಾಗಿ ಮಾಧ್ಯಮದ ಮುಂದೆ ಹೇಳಿಕೆ ನೀಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದ ಅಧೀರ್ ರಂಜನ್ ಚೌಧರಿ ಅವರು ಕಪಿಲ್ ಸಿಬಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
PublicNext
18/11/2020 12:18 pm