ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಜಿತ್ ಪವಾರ್ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ:ಯಡಿಯೂರಪ್ಪ

ಬೆಂಗಳೂರು- ಮಹಾಜನ್ ಆಯೋಗದ ವರದಿಯ ತೀರ್ಪು ಅಂತಿಮ ಅನ್ನೋದು ಇಡೀ ಪ್ರಪಂಚಕ್ಕೇ ಗೊತ್ತಿದೆ‌. ಹೀಗಾಗಿ ಗಡಿ ವಿಚಾರವಾಗಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿರುವುದು ಉದ್ಧಟತನದ ಹೇಳಿಕೆ. ಅವರು ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಮಾಡಿದ್ದು ಕರ್ನಾಟದಲ್ಲಿನ ಮರಾಠ ಸಮುದಾಯದ ಅಭಿವೃದ್ಧಿಗಾಗಿ. ನಮ್ಮ ರಾಜ್ಯದ ಮರಾಠಿಗರು ಕೂಡ ಕನ್ನಡಿಗರೇ ಆಗಿದ್ದಾರೆ. ಮರಾಠಿಗರು ಕಟ್ಟಾ ಹಿಂದುತ್ವವಾದಿಗಳು. ಅವರು ಬೆಳಗಾವಿ ವಿಶ್ವ ಕನ್ನಡ ಸಮ್ಮೇಳನದಲ್ಲಿ ಬಂದು ಭಾಗವಹಿಸಿದ್ದಾರೆ. ಹೀಗಿರುವಾಗ ಅಜಿತ್ ಪವಾರ್ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಈ ರೀತಿ ಮಾತಾಡೊದನ್ನು ಅವರು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ತಾಕೀತು ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

18/11/2020 02:10 pm

Cinque Terre

71.36 K

Cinque Terre

14