ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ಬಂದ ಯಡಿಯೂರಪ್ಪ

ನವದೆಹಲಿ: ರಾಜ್ಯ ಸಚಿವ ಸಂಪುಟದಲ್ಲಿ ಹೊಸಬರ ಸೇರ್ಪಡೆ ಕುರಿತಂತೆ, ಪಕ್ಷದ ಹೈಕಮಾಂಡ್‍‍ನಿಂದ ಗ್ರೀನ್ ಸಿಗ್ನಲ್ ಪಡೆಯುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಫಲರಾಗದೆ, ಬರಿಗೈಯಲ್ಲಿ ಮರಳಿದ್ದಾರೆ.

ಸಂಪುಟ ಪುನಾರಚನೆಯೋ, ವಿಸ್ತರಣೆಯೋ ಎಂಬುದರ ಜಿಜ್ಞಾಸೆಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ಯಡಿಯೂರಪ್ಪ ಬುಧವಾರ ಬೆಳಗ್ಗೆಯೇ ನವದೆಹಲಿಗೆ ಪ್ರಯಾಣ ಬೆಳೆಸಿದ್ದರು. ಡಿಸಿಎಂ ಗೋವಿಂದ ಕಾರಜೋಳ ಕೂಡ ಜತೆಯಲ್ಲಿದ್ದರು.

ನವದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವನ್ನು ಭೇಟಿ ಮಾಡಿದ ಯಡಿಯೂರಪ್ಪ, ತಾವೇ ಸಿದ್ಧಪಡಿಸಿದ ಸಚಿವ ಆಕಾಂಕ್ಷಿಗಳ ಪಟ್ಟಿ ನೀಡಿದ್ದಾರೆ. ಆದರೆ, ಪಟ್ಟಿ ಪರೀಕ್ಷಿಸಲು ಮೂರರಿಂದ ನಾಲ್ಕು ದಿನಗಳ ಕಾಲಾವಕಾಶ ಬೇಕೆಂದು ನಡ್ಡಾ ತಿಳಿಸಿದ್ದು, ಯಡಿಯೂರಪ್ಪ ಬರಿಗೈಯಲ್ಲಿ ವಾಪಸ್ ವಿಮಾನವೇರಿದ್ದಾರೆ.

ಈ ಮೂಲಕ ಸಚಿವಾಕಾಂಕ್ಷಿಗಳು ಮತ್ತೊಮ್ಮೆ ನಿರಾಸೆ ಅನುಭವಿಸಬೇಕಾಗಿದೆ. ಮೂಲಗಳ ಪ್ರಕಾರ, ಬಿಜೆಪಿ ಸರಕಾದ ರಚನೆಗೆ ಸಹಕರಿಸಿದ ಮೂವರು ವಲಸಿಗರಿಗೆ ಮಾತ್ರ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆಯೆಂದು ಹೇಳಲಾಗುತ್ತಿದೆ.

Edited By : Nagaraj Tulugeri
PublicNext

PublicNext

18/11/2020 06:42 pm

Cinque Terre

68.95 K

Cinque Terre

9

ಸಂಬಂಧಿತ ಸುದ್ದಿ