ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿ. 7 ರಿಂದ 15ರವರೆಗೆ ಚಳಿಗಾಲದ ಅಧಿವೇಶನ

ಬೆಂಗಳೂರು : ವಿಧಾನ ಮಂಡಲದ ಚಳಿಗಾಲದ ಅಧಿವೇಶನವು ಡಿಸೆಂಬರ್ 7 ರಿಂದ 15ರವರೆಗೆ ಬೆಂಗಳೂರಿನಲ್ಲೇ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಅಧಿವೇಶನ ಆಯೋಜಿಸುವುದಕ್ಕೆ ನಿಯಮಗಳನ್ನು ಮಾಡಲಾಗಿದ್ದು, ಅದರಂತೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಅವಧಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಬೇಕಾಗಿದೆ.

ಇದರಂತೆ, ಸಚಿವ ಸಂಪುಟ ಈ ತೀರ್ಮಾನವನ್ನು ತೆಗೆದುಕೊಂಡಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

Edited By : Nirmala Aralikatti
PublicNext

PublicNext

18/11/2020 08:43 pm

Cinque Terre

72.03 K

Cinque Terre

0

ಸಂಬಂಧಿತ ಸುದ್ದಿ