ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಕೆಶಿ ಪುತ್ರಿ ಐಶ್ವರ್ಯ- ಅಮರ್ಥ್ಯ ನಿಶ್ಚಿತಾರ್ಥ ಸಂಭ್ರಮ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಮತ್ತು ದಿ. ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನೆರವೇರಿತು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೋಟೆಲ್‍ವೊಂದರಲ್ಲಿ ಈ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಡಿ.ಕೆ ಶಿವಕುಮಾರ್ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವ ಆರ್‌.ಅಶೋಕ್ ಮತ್ತು ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಅಮರ್ಥ್ಯ ಕಾಫಿ ಡೇ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.

Edited By : Vijay Kumar
PublicNext

PublicNext

19/11/2020 03:04 pm

Cinque Terre

57.36 K

Cinque Terre

3

ಸಂಬಂಧಿತ ಸುದ್ದಿ