ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'5 ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ'

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಉಪ ಮುಖ್ಯಮಂತ್ರಿ, ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದಲ್ಲಿಂದು ನಡೆದ ಬೆಂಗಳೂರು ಟೆಕ್‌ ಸಮ್ಮಿಟ್ (ಬಿಟಿಎಸ್)2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್‌ ಇಂಡಿಯಾ ಹಾಗೂ ಆತ್ಮ ನಿರ್ಭರ್ ಭಾರತ್‌ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದೆ. ಸದ್ಯಕ್ಕೆ 52 ಶತಕೋಟಿ ಡಾಲರ್‌ನಷ್ಟು ಡಿಜಿಟಲ್‌ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಐದು ವರ್ಷಗಳಲ್ಲಿ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ'' ಎಂದು ತಿಳಿಸಿದೆ.

ಈಗಾಗಲೇ ಲಭ್ಯವಿರುವ 4ಜಿ ಸೇವೆಯ ಜತೆಗೆ, 5ಜಿ ಸೇವೆಯನ್ನೂ ಪ್ರತಿ ಮೂಲೆಗೂ ವಿಸ್ತರಿಸಲಾಗುವುದು. ಈ ಮೂಲಕ ಡಿಜಿಟಲ್‌ ಆರ್ಥಿಕತೆ ಗುರಿಗೆ ಶಕ್ತಿ ತುಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

Edited By : Vijay Kumar
PublicNext

PublicNext

19/11/2020 03:38 pm

Cinque Terre

35.3 K

Cinque Terre

1

ಸಂಬಂಧಿತ ಸುದ್ದಿ