ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪಚುನಾವಣೆ ಸೋಲು: ತೆಲಂಗಾಣದಲ್ಲಿ ಮಹಾಮೈತ್ರಿ ಜಪ ಶುರು

ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತೆಲಂಗಾಣದಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಾದೇಶಿಕ ಪಕ್ಷಗಳನ್ನು ಸೇರಿಸಿ ಒಕ್ಕೂಟ ರಚಿಸಲು ಮುಂದಾಗಿದ್ದಾರೆ.

ಈಗಾಗಲೇ ಕೆಸಿಆರ್, ದೇಶದ ಹಲವು ರಾಜ್ಯಗಳಲ್ಲಿ ಇರುವ ಪ್ರಾದೇಶಿಕ ಪಕ್ಷಗಳ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಡಿಸೆಂಬರ್‌ನಲ್ಲಿ ತೆಲಂಗಾಣದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಲ್ಲ ನಾಯಕರು ಭಾಗವಹಿಸುವಂತೆ ಕೆಸಿಆರ್ ಅವರು ಆಹ್ವಾನ ನೀಡಿದ್ದಾರೆ ಎಂಬ ಮಾಹಿತಿ ಇದೆ.

ಎನ್‍ಸಿಪಿ ನಾಯಕ ಶರದ್ ಪವಾರ್, ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್‍ಪಿ ನಾಯಕಿ ಮಾಯಾವತಿ, ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್, ಬಿಜೆಡಿಯ ನವೀನ್ ಪಟ್ನಾಯಕ್, ಡಿಎಂಕೆ ಸ್ಟಾಲೀನ್, ಜಿಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರಿಗೆ ಆಹ್ವಾನ ನೀಡಲಾಗಿದೆ.

ಈ ಪಕ್ಷಗಳ ನಾಯಕರು ಮಾತ್ರವಲ್ಲದೇ ಇನ್ನೂ ಅನೇಕ ರಾಜಕೀಯ ಪಕ್ಷಗಳು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

Edited By : Nagaraj Tulugeri
PublicNext

PublicNext

19/11/2020 04:47 pm

Cinque Terre

60.94 K

Cinque Terre

6