ಬೆಂಗಳೂರು- ರಾಜ್ಯದ ಎಲ್ಲ ನಗರಸಭೆ, ಪುರಸಭೆ, ಹಾಗೂ ಪಟ್ಟಣ ಪಂಚಾಯತಿಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಕಳೆದ ಅಕ್ಟೋಬರ್ 8ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.
ಈ ಬಗ್ಗೆ ಹೈಕೋರ್ಟಿನ ಏಕಸದಸ್ಯ ಪೀಠ, ಇಂದು ತೀರ್ಪು ನೀಡಿದೆ. ಈ ಕುರಿತಾಗಿ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಅವಕಾಶ ನೀಡಿದೆ.
ರಾಜ್ಯದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಬಹಳಷ್ಟು ಕಡೆ ಚುನಾವಣೆ ನಡೆದಿದೆ. ನಂತರ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯೂ ನಡೆದು ಫಲಿತಾಂಶ ಪ್ರಕಟವಾಗಿದೆ. ಆದರೆ ಈ ಆದೇಶದಿಂದ ಚುನಾವಣಾ ಫಲಿತಾಂಶಗಳು ಅಮಾನತು ಹಂತದಲ್ಲಿರುತ್ತವೆ.
PublicNext
19/11/2020 06:11 pm