ತುಮಕೂರು: ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ವರಿಷ್ಟರು ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಇದು ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಮುನ್ಸೂಚನೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಕೆ ಎನ್ ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಗುರುವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಲ್ಲಿ ಮುಂದುವರೆಸುವ ಆಸೆ ಇದ್ದರೆ ಅವರು ತೆಗೆದುಕೊಂಡು ಹೋಗಿದ್ದ ಪಟ್ಟಿಗೆ ಅನುಮೋದನೆ ನೀಡುತ್ತಿದ್ದರು. ಆದರೆ ಅವರಿಗೆ ಯಡಿಯೂರಪ್ಪ ಬೇಕಿಲ್ಲ. ಹೀಗಾಗಿ ಬರಿಗೈಯಲ್ಲಿ ವಾಪಸ್ ಕಳಿಸಿದ್ದಾರೆ ಎಂದರು.
PublicNext
19/11/2020 07:30 pm