ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ವಾರಿಯರ್ಸ್ ಮಕ್ಕಳಿಗೆ ಎಂಬಿಬಿಎಸ್ ಸೀಟ್

ನವದೆಹಲಿ: ಆಶಾ ಕಾರ್ಯಕರ್ತೆಯರು, ನರ್ಸ್, ವೈದ್ಯರಿಂದ ಹಿಡಿದು ಕೊರೊನಾದಿಂದ ಸಾವನ್ನಪ್ಪಿದ ವಾರಿಯರ್ಸ್ ಮಕ್ಕಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‍ಗೆ ಕಡ್ಡಾಯವಾಗಿ 5 ಸೀಟ್ ಮೀಸಲಿಡಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್ ಘೋಷಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಗೆ ಬರಲಿದೆ. ಕೊರೊನಾ ಕೆಲಸ ಮಾಡುತ್ತಿರುವಾಗ ಅಥವಾ ಕೊರೊನಾ ಸಂಬಂಧಿ ಯಾವುದೇ ಕೆಲಸ ಮಾಡುತ್ತಿರುವಾಗ ನರ್ಸ್, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಕೊರೊನಾ ವಾರಿಯರ್ಸ್ ಮಕ್ಕಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಹಾಗೂ ಬಿಡಿಎಸ್ ಪ್ರವೇಶಕ್ಕೆ 5 ಸೀಟ್ ಮೀಸಲಿರಿಸಬೇಕು. ನ್ಯಾಷನಲ್ ಕೋಟಾದ ಅಡಿಯಲ್ಲಿ ಮೆರಿಟ್ ಆಧಾರದ ಮೇಲೆ ಅವರಿಗೆ ಪ್ರವೇಶ ಕಲ್ಪಿಸಬೇಕು ಎಂದು ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

19/11/2020 07:52 pm

Cinque Terre

79.52 K

Cinque Terre

1