ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಯಾವತಿ ತಂದೆ ಪ್ರಭು ದಯಾಳ್ ವಿಧಿವಶ

ನವದೆಹಲಿ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ತಂದೆ ಪ್ರಭು ದಯಾಳ್‌ (95) ದೆಹಲಿಯಲ್ಲಿ ವಿಧಿವಶರಾಗಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಎಸ್‌ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ, "ಫ್ರಭು ದಯಾಳ್​ ಅವರ ನಿಧನಕ್ಕೆ ಬಿಎಸ್‌ಪಿ ನಾಯಕರು ಸಂತಾಪ ಸೂಚಿಸಿದ್ದು, ಪಕ್ಷದ ಎಲ್ಲಾ ಪದಾಧಿಕಾರಿಗಳ ಪರವಾಗಿ ಅವರಿಗೆ ನಾವು ಸಂತಾಪ ಸೂಚಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ದೇವರು ನೀಡಲಿ'' ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದಾರೆ. "ಯುಪಿ ಮಾಜಿ ಸಿಎಂ ಮಾಯಾವತಿ ಜಿ ಅವರ ತಂದೆ ಶ್ರೀ ಪ್ರಭು ದಯಾಳ್ ಅವರ ನಿಧನ ತುಂಬಾ ದುಃಖ ತಂದಿದೆ. ಮಾಯಾವತಿ ಜಿ ಮತ್ತು ದುಃಖಿತ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ" ಎಂದು ಟ್ವೀಟ್ ಮಾಡಿದ್ದಾರೆ.

ಪ್ರಭು ದಯಾಳ್ ಅವರು ಭಾರತೀಯ ಅಂಚೆ ಇಲಾಖೆಯಲ್ಲಿ ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಅವರು ಮಾಯಾವತಿ ಸೇರಿದಂತೆ ಮೂವರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ.

Edited By : Vijay Kumar
PublicNext

PublicNext

20/11/2020 10:40 am

Cinque Terre

59.72 K

Cinque Terre

3

ಸಂಬಂಧಿತ ಸುದ್ದಿ