ಬೆಂಗಳೂರು: ಕರ್ನಾಟಕ ಬಂದ್ ಮಾಡುವ ವಿಚಾರವಾಗಿ ಇಂದು ಕನ್ನಡ ಪರ ಸಂಘಟನೆಗಳು ಸಭೆ ನಡೆಸಿವೆ. ಈ ಸಭೆಯಲ್ಲಿ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಎಲ್ಲ ಕನ್ನಡ ಪರ ಸಂಘಟನೆಗಳು ಒಮ್ಮತದ ನಿರ್ಣಯಕ್ಕೆ ಬಂದಿವೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಸರ್ಕಾರದ ತೀರ್ಮಾನಕ್ಕೆ ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆಯೇ ಇದರ ವಿರುದ್ಧ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಹೇಳಿದ್ದವು. ಅದೇ ವಿಚಾರವಾಗಿ ಇಂದು ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಕರ್ನಾಟಕ ಬಂದ್‍ಗೆ ಬಹುತೇಕ ಸಂಘಟನೆಗಳು ಬೆಂಬಲ ನೀಡಿವೆ.
ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಸಭೆ ಸೇರಿದ್ದ ಹಲವಾರು ಸಂಘಟನೆಗಳ ಮುಖಂಡರು ಡಿಸೆಂಬರ್ 5ರಂದು ನಡೆಯುವ ಬಂದ್‍ಗೆ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ವಿವಿಧ ಕನ್ನಡಪರ ಸಂಘಟನೆಗಳು, ಓಲಾ, ಊಬರ್ ಅಸೋಸಿಯೇಷನ್, ಆಟೋ ಅಸೋಸಿಯೇಷನ್ ಮತ್ತು ಸ್ಕೂಲ್ ವ್ಯಾನ್ ಅಸೋಸಿಯೇಷನ್ ಬಂದ್‍ಗೆ ಬೆಂಬಲ ನೀಡಿವೆ. ಜೊತೆಗೆ ಬಂದ್ ದಿನ 5 ಲಕ್ಷ ಜನರು ಬೆಂಗಳೂರಿನಲ್ಲಿ ಮೆರವಣಿಗೆ ನಡೆಸುವ ಸಿದ್ಧತೆ ಮಾಡಿಕೊಂಡಿದ್ದಾರೆ. ಬಸ್‍ಗಳನ್ನು ಓಡಾಡಲು ಬಿಡುವುದಿಲ್ಲ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
PublicNext
20/11/2020 02:48 pm