ಬೆಂಗಳೂರು: ಸಂಪುಟ ವಿಸ್ತರಣೆ ಗೊಂದಲ ಇನ್ನೇನು ಮೂರು ದಿನಗಳಲ್ಲಿ ಎಲ್ಲವೂ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗುವ ಸುಳಿವು ನೀಡಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆಗೆ ಮಾತನಾಡಿದ್ದೇನೆ. ಮೂರು ದಿನಗಳ ಎಲ್ಲವೂ ಒಳಗಾಗಿ ಸರಿಹೋಗಲಿದೆ ಎಂದು ತಿಳಿಸಿದ್ದಾರೆ. ಆದರೆ ಸಂಪುಟ ವಿಸ್ತರಣೆ ಆಗಲಿದೆಯಾ ಅಥವಾ ಪುನಾರಚನೆ ಆಗಲಿದ್ಯಾ ಎಂಬ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲ.
ಬುಧವಾರ ದೆಹಲಿಗೆ ತೆರಳಿದ್ದ ಸಿಎಂ ಬಿಎಸ್‌ವೈ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಸಂಪುಟಕ್ಕೆ ಸೇರ್ಪಡೆಗೊಳ್ಳುವವರ ಪಟ್ಟಿಯನ್ನು ನೀಡಿದ್ದರು. ಆದರೆ ವರಿಷ್ಠರಿಂದ ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ.
ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ಬಂದಿದ್ದ ಯಡಿಯೂರಪ್ಪ ಇಂದು ವಿಧಾನ ಸಭೆಯಲ್ಲಿ ಫೈನಲ್ ಎಂಬಂತೆ ಹೇಳಿದ್ದಾರೆ. ಮೂರು ದಿನದಲ್ಲಿ ಎಲ್ಲವೂ ಬಗೆಹರಿಯಲಿದೆ ಎಂದು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಹೇಳಿದ್ದಾರೆ.
PublicNext
20/11/2020 04:06 pm