ಬೆಂಗಳೂರು- ರಾಜ್ಯದ ಉಪಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡಿರುವ ಕೇಂದ್ರ ಬಿಜೆಪಿ ವರಿಷ್ಟರು, ಸದ್ಯಕ್ಕೆ ಸಿಎಂ ಬದಲಾವಣೆ ವಿಷಯಕ್ಕೆ ಕೈ ಹಾಕದಿರಲು ತೀರ್ಮಾನಿಸಿದೆ. ಡಿಸೆಂಬರ್ ತಿಂಗಳ ಒಳಗಾಗಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಿದ್ದಾರೆ ಎಂಬ ಮಾತು ಕೂಗು ಬಿಜೆಪಿ ವಲಯದಲ್ಲೇ ಕೇಳಿ ಬಂದಿತ್ತು. ಈ ಎಲ್ಲ ವದಂತಿಗಳಿಗೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕಿದೆ. ನಾಯಕತ್ವ ಬದಲಾವಣೆಗೆ ಕಾಲ ಪಕ್ವವಾಗಿಲ್ಲ ಎಂದು ಹೇಳಿದೆ.
ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಅದು ಬಿಜೆಪಿಗೆ ತಿರುಗುಬಾಣವಾಗಲಿದೆ. ಜೊತೆಗೆ ಬಹುಸಂಖ್ಯಾತ ಲಿಂಗಾಯತ ಮತಗಳನ್ನು ಬಿಜೆಪಿ ಕಳೆದುಕೊಳ್ಳಲಿದೆ. ಜೊತೆಗೆ ಈ ಹಿಂದೆ ಅಧಿಕಾರ ಕಳೆದುಕೊಂಡಾಗ ಯಡಿಯೂರಪ್ಪ ಅವರು ಬಿಜೆಪಿಯಿಂದ ಹೊರನಡೆದು ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿದ್ದರು. ಇದು 2013ರಲ್ಲಿ ಬಿಜೆಪಿ ಅಧಿಕಾರದಿಂದ ದೂರ ಉಳಿಯುವಂತೆ ಮಾಡಿತು. ಪಕ್ಷದಲ್ಲಿ ಯಡಿಯೂರಪ್ಪ ಅವರು ಪ್ರಭಾವಿ ನಾಯಕರು. ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ರಾಷ್ಟ್ರೀಯ ನಾಯಕರು ಹಿಂದೇಟು ಹಾಕುತ್ತಿದ್ದಾರೆ.
PublicNext
21/11/2020 06:53 pm