ಬೆಂಗಳೂರು: ದೇಶಾದ್ಯಂತ ಲವ್ ಜಿಹಾದ್ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಸಿಡಿದೆದ್ದಿದ್ದಾರೆ. ಶನಿವಾರ ಟ್ವಿಟ್ಟರ್ನಲ್ಲಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾನೇನು ಆರ್ಎಸ್ಎಸ್ ಶಾಖೆಗೆ ಹೋಗಿಲ್ಲ. ಅಲ್ಲಿ ಹೋಗಿ ಕಲಿಯುವಂತದ್ದು ಏನೂ ಇಲ್ಲ. ಆದರೆ ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕೇ ವಿನಃ ಆರ್ ಎಸ್ ಎಸ್ ಅಲ್ಲ. ಬಿಜೆಪಿಯ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಅವರಿಗೆ ಸಂವಿಧಾನ ಪಾಠ ಮಾಡ್ತೇನೆ. ಎಂದು ಸಿದ್ದರಾಮಯ್ಯ ಅವರು ಟ್ವಿಟ್ಟರಿನಲ್ಲಿ ಹೇಳಿದ್ದಾರೆ.
PublicNext
21/11/2020 08:19 pm