ಚೆನ್ನೈ: ಕೇಂದ್ರದ ಎನ್ ಡಿ ಎಅಧಿಕಾರದ ಅವಧಿಯಲ್ಲೇ ತಮಿಳುನಾಡಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಪಣ ತೊಟ್ಟಿರುವ ಗೃಹ ಮಂತ್ರಿ ಅಮಿತ್ ಶಾ ಇಂದಿನಿಂದ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಕಾಲಿಟ್ಟಿದ್ದಾರೆ.
ಎರಡು ದಿನಗಳ ಕಾಲ ತಮಿಳುನಾಡು ಪ್ರವಾಸದಲ್ಲಿರುವ ಅಮಿತ್ ಶಾ ಇಂದು 70 ಸಾವಿರ ಕೋಟಿ ರೂ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ನಂತರ ಮೋದಿ ಸರ್ಕಾರ ತಮಿಳುನಾಡಿಗೆ ನೀಡಿದ ನೆರವನ್ನು ಉಲ್ಲೇಖಿಸಿ ಭಾಷಣ ಮಾಡಿದರು.
ಮೋದಿ ಸರ್ಕಾರ ನೀಲಿ ಕ್ರಾಂತಿ ಮಾಡಲು ಮುಂದಾಗಿದೆ. ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ ಮೀನುಗಾರಿಕಾ ಸಚಿವಾಲಯವನ್ನು ತೆರೆದಿದೆ. ರಾಜ್ಯಕ್ಕೆ 20 ಸಾವಿರ ಕೋಟಿ ಅನುದಾನವನ್ನು ನೀಡಲಾಗುವುದು. ಸಾಗರಮಾಲಾ ಯೋಜನೆಯ ಅಡಿ 2.25 ಲಕ್ಷ ಕೋಟಿ ಹೂಡಿಕೆ ಮಾಡಿದ್ದು ಮೂಲ ಸೌಕರ್ಯ ಅಭಿವೃದ್ಧಿ ಆಗಲಿದೆ. ಇದರಿಂದಾಗಿ ರಾಜ್ಯದ ರಸ್ತೆ, ವಿಮಾನ ನಿಲ್ದಾಣ, ಬಂದರುಗಳು ರೂಪಾಂತರವಾಗಲಿದೆ ಎಂದು ತಿಳಿಸಿದರು.
10 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು 95 ಸಾವಿರ ಕೋಟಿ ರೂ. ಹಣವನ್ನು ಹಾಕಲಾಗಿದೆ. ಮುಂದಿನ ದಿನಗಳಲ್ಲಿ ಕೃಷಿ ಮೂಲ ಸೌಕರ್ಯಕ್ಕಾಗಿ 90 ಸಾವಿರ ಕೋಟಿ ರೂ. ಅನುದಾನವನ್ನು ತಮಿಳುನಾಡಿಗೆ ಒದಗಿಸಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದರು.
PublicNext
21/11/2020 10:58 pm