ರಾಯಚೂರು: ಮಸ್ಕಿ ಉಪಚುನಾವಣೆ ಅಖಾಡ ಸಿದ್ಧವಾಗುತ್ತಿರುವ ಮಧ್ಯೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಯುವಕರೊಂದಿಗೆ ಕಬಡ್ಡಿ ಆಡಿದ್ದಾರೆ.
ಮಸ್ಕಿ ತಾಲೂಕಿನ ಬಳಗಾನೂರಿನಲ್ಲಿ ದೈಹಿಕ ಶಿಕ್ಷಕ ಮಹಾದೇವಪ್ಪ ಸ್ಮರಣಾರ್ಥ ಆಯೋಜಿಸಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಪ್ರತಾಪಗೌಡ ಪಾಟೀಲ್ ಭಾಗಿಯಾಗಿದ್ದರು. ಚುನಾವಣಾ ಪ್ರಚಾರದ ಮಧ್ಯೆ ಪ್ರತಾಪ್ ಗೌಡ ಪಾಟೀಲ್ ಪಂದ್ಯಾವಳಿ ಉದ್ಘಾಟನೆಯ ಭಾಗವಾಗಿ ಯುವಕರೊಂದಿಗೆ ಕಬಡ್ಡಿ ಆಡಿದರು.
ಈ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
PublicNext
22/11/2020 07:40 am