ಬೆಂಗಳೂರು: ಮರಾಠ ಅಭಿವೃದ್ದಿ ಪ್ರಾಧಿಕಾರ ಮಾಡಿದ ಸರ್ಕಾರದ ನಡೆ ವಿರೋಧಿಸಿ ಡಿಸೆಂಬರ್ 5 ರಂದು ಕರೆಕೊಟ್ಟ ಕರ್ನಾಟಕ ಬಂದ್ ನಡೆದೇ ನಡೆಯುತ್ತೆ. ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ.
ಮರಾಠ ಪ್ರಾಧಿಕಾರ ರಚನೆ ಖಂಡಿಸಿ ಭಾನುವಾರ ಬೆಂಗಳೂರಿನ ಮೈಸೂರ್ ಬ್ಯಾಂಕ್ ಸರ್ಕಲ್ ನಲ್ಲಿ ಕಂಬಳಿ ಹಾಸಿಕೊಂಡು ಕುಳಿತು ಪ್ರತಿಭಟನೆ ನಡೆಸಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಿತರಾಗಿದ್ದರು.
ಕೂಡಲೇ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಳ್ಳಾರಿ, ಕೊಪ್ಪಳ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕನ್ನಡ ಕಾರ್ಯಕರ್ತರು ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ಖಂಡಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಸೇರಿದಂತೆ ಹೋರಾಟಗಾರನ್ನು ಬಳಿಕ ಪೊಲೀಸರು ಬಂಧನಕ್ಕೆ ಒಳಪಡಿಸಿದರು.
PublicNext
22/11/2020 04:23 pm