ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಡಿಯುವ ನೀರು ಒದಗಿಸಲು ಮೊದಲ ಆದ್ಯತೆ: ಮೋದಿ

ನವದೆಹಲಿ- ಉತ್ತರ ಪ್ರದೇಶದ ಮಿರ್ಜಾಪುರ ಹಾಗೂ ಸೋನಭ್ರದ್ರ ಜಿಲ್ಲೆಗಳು ಸ್ವಾತಂತ್ರ್ಯ ನಂತರದಿಂದ ಬಹಳಷ್ಟು ನಿರ್ಲಕ್ಷ್ಯಕ್ಕೆ ಒಳಗಾಗಿವೆ‌. ಕಳೆದ ಕೆಲವು ವರ್ಷಗಳಲ್ಲಿ ಈ ಪ್ರದೇಶದ ಪ್ರತಿ ಮನೆಗಳಿಗೆ ನೀರು ಸರಬರಾಜು ಮಾಡಲೆಂದೇ ವೇಗವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಎರಡೂ ಜಿಲ್ಲೆಗಳಿಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿ ಭಾನುವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದುಳಿದ ಪ್ರದೇಶದ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶಕ್ಕಾಗಿ ಜಲ್ ಜೀವನ್ ಮಿಷನ್ ಯೋಜನೆ ಜಾರಿ ತರಲಾಗಿದೆ ಎಂದರು.

ಈ ಯೋಜನೆ ಅಡಿಯಲ್ಲಿ ಇನ್ನೂ ಹಲವಾರು ಹಿಂದುಳಿದ ಪ್ರದೇಶಗಳಿಗೆ ನೀರು ಒದಗಿಸುವ ಉದ್ದೇಶ ಇದೆ. ಉತ್ತರ ಪ್ರದೇಶದ ಮಿರ್ಜಾಪುರ ಹಾಗೂ ಸೋನಭದ್ರ ಜಿಲ್ಲೆಗಳು ದಶಕಗಳಿಂದ ನಿರ್ಲಕ್ಷಕ್ಕೆ ಒಳಗಾಗಿವೆ‌‌. ಈ ಯೋಜನೆ ಜಾರಿಯಿಂದ ಈ ಪ್ರದೇಶಗಳ ಮೂರುವರೆ ಸಾವಿರ ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಮೋದಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

22/11/2020 04:54 pm

Cinque Terre

59.4 K

Cinque Terre

3

ಸಂಬಂಧಿತ ಸುದ್ದಿ