ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ್ಯಾಯಾಂಗ ಬಂಧನದಲ್ಲಿ ಮಾಜಿ ಸಚಿವ ರೋಷನ್ ಬೇಗ್

ಬೆಂಗಳೂರು: ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ಮತ್ತು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಐಎಂಎ ವಂಚನೆ ಪ್ರಕರಣದ ಕುರಿತಾಗಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ವಿಚಾರಣೆ ನಡೆಸಿದ್ದರು. ನಿರಂತರ ವಿಚಾರಣೆ ಮುಗಿದ ಬಳಿಕ ರೋಷನ್‍ರನ್ನು ವಶಕ್ಕೆ ಪಡೆದಿದ್ದಾರೆ. ನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಂಗ ಬಂಧನದ ಆದೇಶದ ಹಿನ್ನಲೆಯಲ್ಲಿ ರೋಷನ್‍ರನ್ನು ಸದ್ಯ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

ರೋಷನ್ ಬೇಗ್ ಅವರ ಮೇಲೆ ಗಂಭೀರ ಆರೋಪ ಮಾಡಿದ್ದ ಐಎಂಎ ಸಂಸ್ಥೆ ಮಾಲೀಕ ಮನ್ಸೂರ್ ಖಾನ್, ರೋಷನ್ ಬೇಗ್ ನನ್ನಿಂದ ಹಣ ಪಡೆದಿದ್ದರು. ಹಾಗೂ ಕೊಟ್ಟ ಹಣ ವಾಪಸ್ ಕೇಳಿದಾಗ ರೌಡಿಗಳಿಂದ ಬೆದರಿಕೆ ಹಾಕಿಸಿದ್ದರು ಎಂದಿದ್ದರು. ಈ ಮಾತುಗಳನ್ನು ವಿಡಿಯೋ ಮಾಡಿದ್ದ ಮನ್ಸೂರ್ ಖಾನ್ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಮನ್ಸೂರ್ ಖಾನ್‍ನಿಂದ ರೋಷನ್ ಅವರು ಅಂದಾಜು ₹200 ಕೋಟಿ ಪಡೆದಿದ್ದಾರೆ ಎಂಬ ಆರೋಪವೂ ಇದೆ.

ಮಾಜಿ ಸಚಿವ ರೋಷನ್ ಬೇಗ್ ಮೇಲೆ ‘ಮನ್ಸೂರ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಲಭ್ಯವಾಗಿವೆ ಎನ್ನಲಾಗಿದೆ. ಈ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ರೋಷನ್ ಅವರನ್ನು ವಶಕ್ಕೆ ಪಡೆದಿದ್ದಾರೆ’ ಎಂದು ಮೂಲಗಳಿಂದ ತಿಳಿದು ಬಂದಿದೆ.

Edited By : Nagaraj Tulugeri
PublicNext

PublicNext

22/11/2020 09:31 pm

Cinque Terre

100.51 K

Cinque Terre

11

ಸಂಬಂಧಿತ ಸುದ್ದಿ