ನವದೆಹಲಿ: ಕಾಂಗ್ರೆಸ್ ಪಕ್ಷದ ಪುನರುಜ್ಜೀವನಕ್ಕಾಗಿ ಆಳವಾದ ರಚನಾತ್ಮಕ ಸುಧಾರಣೆಗಳ ಅಗತ್ಯವಿದೆ ಎಂದು ಪಕ್ಷದ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷ ಕ್ರಮೇಣ ಕ್ಷೀಣಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಆದರೆ ಪಕ್ಷದ ಕಾರ್ಯಕರ್ತರಿಂದ ಹಿಡಿದು ಉನ್ನತ ನಾಯಕತ್ವದವರೆಗೆ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳುವ ತುರ್ತು ಅಗತ್ಯವಿದೆ ಎಂದರು.
ಕುಸಿದು ಬಿದ್ದ ಪಕ್ಷದ ರಚನೆಯನ್ನು ಮರುಸ್ಥಾಪಿಸಬೇಕಾದ ಅಗತ್ಯತೆ ಇದೆ. ಇದಕ್ಕಾಗಿ ಕಾರ್ಯಕರ್ತರು, ನಾಯಕರು ಒಟ್ಟಾಗಿ ಕೆಲಸ ಮಾಡಬೇಕು. ನಾಯಕತ್ವದ ಬದಲಾವಣೆಯಿಂದ ನಾವು ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ವಿವಿಧೆಡೆ ಗೆಲ್ಲುತ್ತೇವೆ ಎಂಬುದು ತಪ್ಪು. ಪಕ್ಷದೊಳಗಿನ ವ್ಯವಸ್ಥೆ ಬದಲಾದಾಗ ಮಾತ್ರ ಇದು ಸಾಧ್ಯವಾಗಲಿದೆ. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಸೋಲು ಅನುಭವಿಸಬೇಕಾಯಿತು ಎಂದರು.
PublicNext
23/11/2020 08:30 am