ಬೆಂಗಳೂರು: ನಾನು ಆರ್ ಎಸ್ ಎಸ್ ಸಂಸ್ಥಾಪಕ ಅಲ್ಲ, ನಾನೊಬ್ಬ ಸಂಘದ ಸ್ವಯಂ ಸೇವಕ. ಡಾ.ಕೇಶವ ಬಲಿರಾಮ ಹೆಡಗೇವಾರ್ ಅವರನ್ನು ಗುರುವಾಗಿ ಸ್ವೀಕರಿಸಿದ್ದೇನೆ. ಸಹಸ್ರಾರು ವರ್ಷಗಳಿಂದ ಪ್ರೇರಣೆ ನೀಡಿದ ಭಗವದ್ ಧ್ವಜವನ್ನು ಮತ್ತು "ವ್ಯಕ್ತಿಗಿಂತ ತತ್ವ ಶ್ರೇಷ್ಠ"ಎಂಬ ಸಿದ್ದಾಂತವನ್ನ ನಂಬಿದ್ದೇನೆ. ಸಂಘವು ತನ್ನ ಸ್ವಯಂ ಸೇವಕರಿಗೆ ದೇಶ ಮೊದಲು ಎನ್ನುವ ತತ್ವ ಕಲಿಸಿಕೊಟ್ಟಿದೆ. "ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ" ಎಂಬ ಭಾವ ನಮ್ಮದು ಎನ್ನುವ ಮೂಲಕ ಸಚಿವ ಸಿ ಟಿ ರವಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ.
ನನಗೆ ಆರ್ ಎಸ್ ಎಸ್ ಬಗ್ಗೆ ಗೊತ್ತಿಲ್ಲ ಎಂದು ಹೇಳುವ ಸಿ.ಟಿ.ರವಿ ಆರ್ ಎಸ್ ಎಸ್ ಸಂಸ್ಥಾಪಕ ಸದಸ್ಯನಾ ?ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಟ್ವೀಟರ್ ಮೂಲಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಇದು ಅರ್ಥವಾಗಬೇಕಾದರೆ, ಸ್ಪೃಶ್ಯತೆಯ, ಜಾತೀಯತೆಯ ಸೋಂಕಿಲ್ಲದೆ ನಾವೆಲ್ಲರೂ ಒಂದು, ಭಾರತ ಮಾತೆಯ ಮಕ್ಕಳು ಎಂದು ತಿಳಿದು ಬದುಕಬೇಕಾದರೆ ನೀವು ಶಾಖೆಗೆ ಬರಬೇಕು. ನೀವು ಕಾಂಗ್ರೆಸ್ ಸಂಸ್ಥಾಪಕ ಎ. ಓ ಹ್ಯೂಮ್ ರ ಮೊಮ್ಮಗನೋ, ಮರಿಮಗನೋ ಎಂದು ನಾನು ನಿಮ್ಮನ್ನು ಕೇಳುವುದಿಲ್ಲ ಎಂದು ಸಿ ಟಿ ರವಿ ವ್ಯಂಗ್ಯವಾಡಿದ್ದಾರೆ.
PublicNext
23/11/2020 08:53 am