ಬೆಂಗಳೂರು: ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ನಿನ್ನೆಯಷ್ಟೇ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದ ಪಾಲಾಗಿದ್ದಾರೆ. ಇತ್ತ ಸೋಮವಾರ ಬೆಳ್ಳಂಬೆಳಿಗ್ಗೆಯೇ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ಬಳಿ ಇರುವ ರೋಷನ್ ಬೇಗ್ ನಿವಾಸದ ಮೇಲೆ ದೆಹಲಿ ಮೂಲದ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬೇಗ್ ಅವರನ್ನು ನಿನ್ನೆ ವಿಚಾರಣೆಗೆ ಒಳಪಡಿಸಿದ್ದರು. ನಂತರ ಅವರನ್ನು ವಶಕ್ಕೆ ಪಡೆದಿದ್ದರು. ನ್ಯಾಯಾಲಯ ಬೇಗ್ ಅವರಿಗೆ 14ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.
PublicNext
23/11/2020 10:26 am