ಪಾಟ್ನಾ: ಬಿಹಾರದಲ್ಲಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕ ಶಕೀಲ್ ಅಹ್ಮದ್ ಖಾನ್ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಎಲ್ಲರೂ ಅಚ್ಚರಿ ಪಡುವಂತೆ ಮಾಡಿದ್ದಾರೆ.
ಬಿಹಾರ ವಿಧಾನ ಸಭೆಯಲ್ಲಿ ಗೆದ್ದ ಎಲ್ಲ ಪ್ರತಿನಿಧಿಗಳು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 5 ದಿನಗಳ ಕಾಲ ಈ ಅಧಿವೇಶ ನಡೆಯಲಿದೆ ಮೊದಲ ದಿನದ ಅಧೀವೇಶನ ರಾಜ್ಯದ ಬಹುತ್ವಕ್ಕೆ ಸಾಕ್ಷಿಯಾಯಿತು. ಸದಸ್ಯರು ಪಕ್ಷದ ವ್ಯಾಪ್ತಿಯನ್ನು ಮೀರಿ ಮೈಥಿಲಿ, ಉರ್ದು, ಹಿಂದಿ ಸೇರಿದಂತೆ ತಮ್ಮ ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇದೇ ವೇಳೆ ಬಿಹಾರದ ಕಡ್ವಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕ ಶಕೀಲ್ ಅಹ್ಮದ್ ಖಾನ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜೆಎನ್‍ಯು ಹಳೆಯ ವಿದ್ಯಾರ್ಥಿಯಾಗಿರುವ ಖಾನ್, ಬಿಜೆಪಿ ಹಾಗೂ ಎಐಎಂಐಎಂ ಪಕ್ಷಗಳಿಗೆ ಈ ಮೂಲಕ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ತಿಳಿಸಿದರು. ಇದೇ ವೇಳೆ ಸೀತಾಮಾರಿ ಕ್ಷೇತ್ರದ ಬಿಜೆಪಿ ಶಾಸಕ ಮಿಥಿಲೇಶ್ ಕುಮಾರ್ ಸಹ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಹಲವು ಸದಸ್ಯರು ಉರ್ದು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಶಿಯೋಹರ್ ಕ್ಷೇತ್ರದ ಆರ್‍ಜೆಡಿ ಶಾಸಕ, ಆನಂದ್ ಮೋಹನ್ ಸಿಂಗ್ ಪುತ್ರ ಚೇತನ್ ಆನಂದ್ ಅವರು ಇಂಗ್ಲಿಷ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
PublicNext
24/11/2020 07:40 am