ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವೆಂಬರ್ 26ರಂದು ರಾಷ್ಟ್ರವ್ಯಾಪಿ ಮುಷ್ಕರ

ನವದೆಹಲಿ: ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಒಕ್ಕೂಟಗಳು ಹಾಗೂ ಕಾಂಗ್ರೆಸ್​ ಅಂಗ ಪಕ್ಷಗಳು ನ.26ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.

16 ಎಡ ಸಂಘಟನೆಗಳು ಹಾಗೂ ಕಾಂಗ್ರೆಸ್ ಕರೆ ಕೊಟ್ಟಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಪ್ರತಿಪಕ್ಷ ಕಾಂಗ್ರೆಸ್​ಗೆ ಅದರ ಮಿತ್ರ ಪಕ್ಷ ಗಳು ಕೈಜೋಡಿಸಲಿವೆ.

ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಸೆವಾ (ಎಸ್​ಇಡಬ್ಲ್ಯುಎ), ಎಐಸಿಸಿಟಿಯು, ಎಲ್‌ಪಿಎಫ್, ಯುಟಿಯುಸಿ ಮತ್ತು ಸ್ವತಂತ್ರ ಒಕ್ಕೂಟಗಳು ಹಾಗೂ ಇತರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ.

ದೇಶದಲ್ಲಿ ಆರ್ಥಿಕ ಸ್ಥಿತಿ ಕುಸಿಯುತ್ತಿದೆ. ಆದರೂ ಸರ್ಕಾರವು ವ್ಯವಹಾರ ಸುಲಭಗೊಳಿಸುವ ಹೆಸರಿನಲ್ಲಿ ತನ್ನ ನೀತಿಗಳನ್ನು ಮುಂದುವರೆಸುತ್ತಿದೆ. ಇದರಿಂದ ವ್ಯಾಪಕ ಬಡತನ ಉಲ್ಬಣಗೊಳ್ಳಲಿದೆ ಮತ್ತು ಬಿಕ್ಕಟ್ಟನ್ನು ಮತ್ತಷ್ಟು ಹೆಚ್ಚಾಗಲಿದೆ ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿವೆ.

Edited By : Nagaraj Tulugeri
PublicNext

PublicNext

24/11/2020 01:39 pm

Cinque Terre

89.35 K

Cinque Terre

9

ಸಂಬಂಧಿತ ಸುದ್ದಿ