ಬೆಂಗಳೂರು-ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರದ ಬಿಜೆಪಿ ನಾಯಕರು ಹಸಿರು ನಿಶಾನೆ ನೀಡಿದ್ದಾರಾ..? ಈ ವಾರಾಂತ್ಯದ ವೇಳೆಗೆ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಆಗುತ್ತಾ..? ಇಂಥದ್ದೊಂದು ಚರ್ಚೆ ಬಿಜೆಪಿಯಲ್ಲಿ ಕೇಳಿ ಬರ್ತಿದೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಈ ನಾಯಕರ ಭೇಟಿ ಬಳಿಕ ಬಿ.ವೈ.ವಿಜಯೇಂದ್ರ ಕೂಡಾ ಸಿಎಂ ಜತೆ ಚರ್ಚೆ ನಡೆಸಿದ್ದಾರೆ. ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಈ ಕಾರಣದಿಂದಲೇ ಸಂತೋಷ್ ಭೇಟಿ ಆಗಿದ್ದಾರೆ ಎನ್ನಲಾಗ್ತಿದೆ. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಾದ ಎಂ.ಪಿ.ಕುಮಾರಸ್ವಾಮಿ, ಎಚ್.ವಿಶ್ವನಾಥ್ ಸಿಎಂ ಭೇಟಿ ಮಾಡಿದ್ದಾರೆ.
PublicNext
24/11/2020 04:18 pm