ತಿರುವನಂತಪುರಂ: ಕೇರಳದಲ್ಲಿ ಇಬ್ಬರು ಮುಸ್ಲಿಂ ಮಹಿಳೆಯರನ್ನ ಚುನಾವಣಾ ಕಣಕ್ಕಿಳಿಸುವ ಮೂಲಕ ಬಿಜೆಪಿ ಅಚ್ಚರಿಯ ಹೆಜ್ಜೆ ಇಟ್ಟಿದೆ.
ಕೇರಳ ರಾಜ್ಯದ ಚುನಾವಣೆಯ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಬ್ಬರು ಮುಸ್ಲಿಂ ಮಹಿಳೆಯರನ್ನು ಬಿಜೆಪಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಮುಸ್ಲಿಂ ಪ್ರಾಬಲ್ಯವುಳ್ಳ ಮಲಪ್ಪುರಂ ಜಿಲ್ಲೆಯು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್)ನ ಭದ್ರಕೋಟೆಯಾಗಿದೆ. ಹೀಗಾಗಿ ಇದಕ್ಕೆ ಪ್ರತಿತಂತ್ರ ಹೂಡಿರುವ ಬಿಜೆಪಿ ಮುಸ್ಲಿಂ ಮಹಿಳೆಯರಿಗೆ ಟಿಕೆಟ್ ನೀಡಿದೆ ಎನ್ನಲಾಗುತ್ತಿದೆ.
ಮಲಪ್ಪುರಂ ಜಿಲ್ಲೆಯ ವಂಡೂರ್ ಗ್ರಾಮ ಪಂಚಾಯಿತಿಯ ವಾರ್ಡ್ ಸಂಖ್ಯೆ 6ರಿಂದ ಟಿ.ಪಿ.ಸುಲ್‌ಫತ್ ಹಾಗೂ ಪೊನ್ಮುಂಡಂ ಗ್ರಾಮ ಪಂಚಾಯಿತಿಯ 9ನೇ ವಾರ್ಡ್‌ನಿಂದ ಆಯಿಷಾ ಹುಸೇನ್ ಸ್ಪರ್ಧೆಯಲ್ಲಿದ್ದಾರೆ.
PublicNext
24/11/2020 04:39 pm