ಮುಂಬೈ: ಪತ್ರಕರ್ತ ಅರ್ನಾಬ್ ಗೋಸ್ವಾಮಿ ಹಾಗೂ ನಟಿ ಕಂಗನಾ ರಣಾವತ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದ ಶಿವಸೇನೆ ಮುಖಂಡರೊಬ್ಬರ ಮನೆಯ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಸೇನೆ ಮುಖಂಡ, ಶಾಸಕ ಪ್ರತಾಪ್ ಸರ್ನಾಯಕ್ ಅವರ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನಿ ಲಾಂಡರಿಂಗ್ ಕುರಿತು ಪ್ರತಾಪ್ ಸರ್ನಾಯಕ್ ಮತ್ತು ಅವರ ಮಗನನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ಶಾಸಕರ ಸಂಪರ್ಕ ಹೊಂದಿದ್ದ ಥಾಣೆ ಮತ್ತು ಮುಂಬೈನ 10 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.
PublicNext
24/11/2020 05:15 pm