ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಪುಟ ಜಗ್ಗಾಟದ ಮಧ್ಯೆ ಎಸ್.ಆರ್.ವಿಶ್ವನಾಥ್‌ಗೆ ಮತ್ತೊಂದು ಮಹತ್ವದ ಹುದ್ದೆ

ಬೆಂಗಳೂರು: ಸಂಪುಟ ಜಗ್ಗಾಟದ ನಡುವೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರವು ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗೆ ಮಹತ್ವದ ಹುದ್ದೆ ನೀಡಿದೆ.

ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ 1976 ಕಲಂ 3(4)ರ ಅಡಿ ಈ ನೇಮಕ ಮಾಡಲಾಗಿದೆ. ಅಧ್ಯಕ್ಷರಾಗಿದ್ದ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅವರ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ, ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ.

Edited By : Vijay Kumar
PublicNext

PublicNext

24/11/2020 08:32 pm

Cinque Terre

90.46 K

Cinque Terre

0

ಸಂಬಂಧಿತ ಸುದ್ದಿ