ವಾಷಿಂಗ್ಟನ್: ಅಮರಿಕ ಚುನಾವಣೆ ಮುಗಿದಾಗಿನಿಂದ ಅಧಿಕಾರ ಕಳೆದುಕೊಂಡಿದ್ದ ಡೊನಾಲ್ಡ್ ಟ್ರಂಪ್, ಒಂದಾದ ಮೇಲೊಂದರಂತೆ ತಗಾದೆ ತೆಗೆಯುತ್ತಲೇ ಇದ್ದರು. ಆದರೆ ಸದ್ಯಕ್ಕೆ ಅವರು ತಣ್ಣಗಾಗಿದ್ದಾರೆ. ಅಮೆರಿಕದ ನೂತನ ಅಧ್ಯಕ್ಷ ಜೋ ಬಿಡೆನ್‌ಗೆ ಅಧಿಕಾರ ಹಸ್ತಾಂತರಿಸಲು ನಿರಾಕರಿಸಿದ್ದ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್, ಇದೀಗ ಸುಗಮ ಅಧಿಕಾರ ಹಸ್ತಾಂತರಕ್ಕೆ ಮನಸ್ಸು ಮಾಡಿದ್ದಾರೆ.
ಈ ಕುರಿತು ಖುದ್ದು ಟ್ವೀಟ್ ಮಾಡಿರುವ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್, ದೇಶದ ಒಳಿತಿಗಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಆರಂಭಿಸುವಂತೆ ಶ್ವೇತಭವನದ ಸಾಮಾನ್ಯ ಸೇವೆಗಳ ಆಡಳಿತ ಮುಖ್ಯಸ್ಥೆ ಎಮಿಲಿ ಮರ್ಫಿ ಅವರಿಗೆ ಸೂಚಿಸಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ನ್ಯಾಯಕ್ಕಾಗಿ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ಆದರೆ ದೇಶದ ಒಳಿತಿಗಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಒಪ್ಪಿರುವುದಾಗಿ ಟ್ರಂಪ್ ಹೇಳಿದ್ದಾರೆ.
PublicNext
25/11/2020 11:15 am