ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಒಂದು ದೇಶ, ಒಂದೇ ಚುನಾವಣೆ' : ಪ್ರಧಾನಿ ಮೋದಿ

ನವದೆಹಲಿ: ಅಖಿಲ ಭಾರತ ಅಧಿಕಾರಿಗಳ 80ನೇ ಸಮಾವೇಶದ ಅಂತಿಮ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಒನ್ ನೇಷನ್, ಒನ್ ಎಲೆಕ್ಷನ್ ಬಗ್ಗೆ ಮಾತನಾಡಿದ್ದಾರೆ.

ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು. ಇದರಿಂದ ಆಗಾಗ್ಗೆ ನಡೆಯುವ ಮತದಾನದಿಂದಾಗಿ ಪ್ರತಿ ಕೆಲ ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು ಹೇಳಿದ್ದಾರೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತವೆ.

ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದು ಕರೆ ನೀಡಿದ್ದಾರೆ.

ಒಂದೇ ಮತದಾರರ ಪಟ್ಟಿಯನ್ನು ಲೋಕಸಭಾ, ವಿಧಾನಸಭಾ ಹಾಗೂ ಇತರ ಚುನಾವಣೆ ಬಳಸಿಕೊಳ್ಳಬೇಕು. ಇದಕ್ಕಾಗಿ ಸಮಯ ಹಾಗೂ ಹಣವನ್ನು ಯಾಕೆ ವ್ಯರ್ಥ ಮಾಡುತ್ತಿದ್ದೇವೆ ಎಂದು ಪ್ರಶ್ನಿಸಿದರು.

ಇದೇ ವೇಳೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಮೂರೂ ವಿಭಾಗಗಳ ನಡುವೆ ಸಮನ್ವಯದ ಅಗತ್ಯವಿದೆ.

ಅವರ ಪಾತ್ರ ಹಾಗೂ ಕೆಲಸದ ಬಗ್ಗೆ ಸಂವಿಧಾನದಲ್ಲಿ ವಿವರಿಸಲಾಗಿದೆ ಎಂದು ಹೇಳಿದರು.

Edited By : Nirmala Aralikatti
PublicNext

PublicNext

26/11/2020 09:50 pm

Cinque Terre

100.87 K

Cinque Terre

14

ಸಂಬಂಧಿತ ಸುದ್ದಿ