ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಿಂಗಾಯತ ಸಮುದಾಯಕ್ಕೆ ಬಂಪರ್ ಕೊಡುಗೆ ಕೊಟ್ಟ ಯಡಿಯೂರಪ್ಪ

ಬೆಂಗಳೂರು: ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪ ಬಂಪರ್ ಕೊಡುಗೆ ನೀಡಲಿದ್ದಾರೆ. ಇತ್ತೀಚೆಗಷ್ಟೇ ಲಿಂಗಾಯತ ನಿಗಮ ಸ್ಥಾಪನೆ ಆದೇಶ ನೀಡಿದ್ದ ಸಿಎಂ, ನಿಗಮಕ್ಕೆ 500 ಕೋಟಿ ಆರಂಭಿಕ ಅನುದಾನ ಘೋಷಿಸಿದ್ದರು. ಇದೀಗ ಲಿಂಗಾಯತ ಸಮುದಾಯಕ್ಕೆ ಮತ್ತಷ್ಟು ಆಫರ್ ನೀಡಲಿದ್ದಾರೆ.

ಇಂದು ಬೆಳಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಬಳಿಕ ಸಿಎಂ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಿಎಂ ಈ ಬಗ್ಗೆ ಖುದ್ದು ಘೋಷಣೆ ಮಾಡಲಿದ್ದಾರೆ. ನಿನ್ನೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿಗಳನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದರು. ಈ ವೇಳೆ ಸ್ವಾಮೀಜಿ, ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2ಎಗೆ ಸೇರಿಸಬೇಕು ಎಂದು ಮನವಿ ಮಾಡಿದ್ದರು. ಆಗ ಸಿಎಂ, ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದರು ಎನ್ನಲಾಗಿದೆ.

ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಿಫಾರಸು ಮಾಡಲಿದ್ದಾರೆ. ತರಾತುರಿಯಲ್ಲಿ ಕ್ಯಾಬಿನೆಟ್ ಅಜೆಂಡಾಗೆ ಸೇರಿಸಿರುವ ಸಿಎಂ, ಕೇಂದ್ರಕ್ಕೆ ಶಿಫಾರಸು ಕಳಿಸುವಲ್ಲಿ ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ಲಿಂಗಾಯತ ಸಮುದಾಯದ ಓಲೈಕೆಗೆ ಯಡಿಯೂರಪ್ಪ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ.

ಇನ್ನು ಇದೇ ವಿಚಾರವಾಗಿ ನಿನ್ನೆ ಸಿಎಂ ಯಡಿಯುರಪ್ಪ, ಲಿಂಗಾಯತ ಸಚಿವರ ಜೊತೆ ಪ್ರತ್ಯೇಕ ಚರ್ಚೆ ನಡೆಸಿದ್ದರು. ಸಚಿವ ಜಗದೀಶ್ ಶೆಟ್ಟರ್, ವಿ.ಸೋಮಣ್ಣ, ಸಿ.ಸಿ ಪಾಟೀಲ್, ಬಸವರಾಜ ಬೊಮ್ಮಾಯಿ ಹಾಗೂ ಶಶಿಕಲಾ ಜೊಲ್ಲೆ ಜೊತೆ ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದರು.

Edited By : Nagaraj Tulugeri
PublicNext

PublicNext

27/11/2020 09:15 am

Cinque Terre

79.32 K

Cinque Terre

2

ಸಂಬಂಧಿತ ಸುದ್ದಿ