ಬೆಂಗಳೂರು- ವಿಧಾನ ಪರಿಷತ್ ಸದಸ್ಯರನ್ನಾಗಿ ಎಂಟಿಬಿ ನಾಗರಾಜ್, ಎಚ್.ವಿಶ್ವನಾಥ್ ಮತ್ತು ಆರ್.ಶಂಕರ್ ಅವರನ್ನು ಆಯ್ಕೆ ಮಾಡಿರುವ ಪ್ರಕ್ರಿಯೆ ಕಾನೂನು ಬದ್ಧವಾಗಿದೆ ಎಂದು ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವದಗಿ ಉಚ್ಛ ನ್ಯಾಯಾಲಯಕ್ಕೆ ವಿವರಣೆ ನೀಡಿದ್ದಾರೆ.
ಶಾಸಕ ಸ್ಥಾನದಿಂದ ಅನರ್ಹಗೊಂಡ ನಂತರ ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಚುನಾಯಿತರಾಗದ ಈ ಮೂವರಿಗೆ ಸಚಿವ ಸ್ಥಾನ ನೀಡದಿರಲು ರಾಜ್ಯ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಹೈಕೋರ್ಟ್‌ಗೆ ವಿವರಿಸಿದ್ದಾರೆ. ಶಾಸಕ ಸ್ಥಾನದಿಂದ ಅನರ್ಹಗೊಂಡ ನಂತರ ವಿಧಾನಸಭೆ ಉಪ ಚುನಾವಣೆಯಲ್ಲಿ ಚುನಾಯಿತರಾಗದ ಈ ಮೂವರಿಗೆ ಸಚಿವ ಸ್ಥಾನ ನೀಡದಿರಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಎ.ಎಸ್. ಹರೀಶ್ ಹಾಗೂ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು. ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳ ಪಟ್ಟಿಯಿಂದ ರಾಜ್ಯಪಾಲರನ್ನು ಕೈಬಿಡಲು ಅರ್ಜಿದಾರರಿಗೆ ಸೂಚಿಸಿ, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಸರ್ಕಾರದ ಪರ ಅಡ್ವೊಕೇಟ್ ಜನರಲ್ ವಾದ ಮಂಡಿಸಿ, ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಎಚ್. ವಿಶ್ವನಾಥ್ ಅವರನ್ನು ಸಾಹಿತಿ ಎಂದು ಕೋಟಾದಡಿ ರಾಜ್ಯಪಾಲರು ಪರಿಷತ್‌ಗೆ ನಾಮ ನಿರ್ದೇಶನ ಮಾಡಿದ್ದಾರೆ. ನಾಮನಿರ್ದೇಶನ ಮಾಡಲು ರಾಜ್ಯಪಾಲರಿಗೆ ಅಧಿಕಾರ ಇದೆ. ಹೀಗಾಗಿ, ಎಂಎಲ್‌ಸಿ ಸ್ಥಾನಕ್ಕೆ ಈ ಮೂವರ ಆಯ್ಕೆ ಕಾನೂನು ಪ್ರಕಾರವೇ ನಡೆದಿದೆ’ ಎಂದು ವಿವರಿಸಿದ್ದಾರೆ. ಹಾಗೂ ಆಯ್ಕೆಗೆ ಸಂಬಂಧಿಸಿದ ಕಡತವನ್ನು ನ್ಯಾಯಪೀಠಕ್ಕೆ ಸಲ್ಲಿಸಿದ್ದಾರೆ.
PublicNext
27/11/2020 09:54 am