ಬೆಂಗಳೂರು- ವೀರಶೈವ-ಲಿಂಗಾಯತ ಸಮುದಾಯವನ್ನು ಓಬಿಸಿ ಪಟ್ಟಿಗೆ ಸೇರಿಸುವ ಕುರಿತು ಸಿಎಂ ಯಡಿಯೂರಪ್ಪ ಇಂದು ತೀರ್ಮಾನ ಮಾಡಬೇಕಿತ್ತು. ಆದ್ರೆ ಅದರಿಂದ ಸದ್ಯ ಹಿಂದೆ ಸರಿದಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿ ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇತ್ತು. ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗಿ ಬಂದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಓಬಿಸಿ ಪಟ್ಟಿಗೆ ಸೇರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇದೇ ವೇಳೆ ಪ್ರತಿಕ್ರಯಿಸಿದ ಸಿಎಂ, ಈ ಬಗ್ಗೆ ಅಮಿತ್ ಶಾ ಜೊತೆ ಈಗಷ್ಟೇ ಮಾತಾಡಿದ್ದೇನೆ. ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆಯ ಅಂತಿಮ ಪಟ್ಟಿ ಬರಲಿದೆ ಎಂದರು.
PublicNext
27/11/2020 12:37 pm