ಪಣಜಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಮೃನಾಲ್ ಹೆಬ್ಬಾಳ್ಕರ್ ಅದ್ಧೂರಿ ವಿವಾಹ ಇಂದು ಗೋವಾದ ಲೀಲಾ ಪ್ಯಾಲೆಸ್‌ನಲ್ಲಿ ನಡೆಯಿತು.
ಲೀಲಾ ಪ್ಯಾಲೆಸ್ ಹೋಟೆಲ್‌ನಲ್ಲಿ ಮೃನಾಲ್ ಹೆಬ್ಬಾಳ್ಕರ್ ಹಾಗೂ ಡಾ. ಹಿತಾ ವಿವಾಹ ಅದ್ಧೂರಿಯಾಗಿ ನೆರವೇರಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಯು ಟಿ ಖಾದರ್, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿ, ವಿನಯ್ ಗುರುಜಿ ಮದುವೆಯಲ್ಲಿ ಪಾಲ್ಗೊಂಡು ನವದಂಪತಿಗೆ ಶುಭಕೋರಿದರು.
ಡಾ. ಹಿತಾ ಭದ್ರವಾತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಸಹೋದರ ಬಿ.ಕೆ.ಶಿವಕುಮಾರ್ ಪುತ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ರಾಜಕೀಯ ನಾಯಕರು ಆಗಮಿಸಿದ್ದರು.
PublicNext
27/11/2020 03:25 pm