ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೂಜೆ ನೆಪ- ದೆಹಲಿಯಲ್ಲಿ ರಾಜ್ಯ ಬಿಜೆಪಿ ನಾಯಕರ ಹೈಡ್ರಾಮಾ ಮೀಟಿಂಗ್!

ನವದೆಹಲಿ: ರಾಜ್ಯ ಸಚಿವ ಸಂಪುಟ ಪುನರ್​ರಚನೆಯೋ? ವಿಸ್ತರಣೆಯೋ? ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಅಷ್ಟೇ ಅಲ್ಲದೆ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್‌.ಯಡಿಯೂರಪ್ಪ ಅವರು ಕೆಳಗಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಮಧ್ಯೆ ದೆಹಲಿಯಲ್ಲಿ ಬಿಜೆಪಿ ನಾಯಕರ ಲೆಕ್ಕಾಚಾರ ಜೋರಾಗಿ ನಡೆಯುತ್ತಿದೆ.

ದೆಹಲಿಯಲ್ಲಿ ಬಿಜೆಪಿ ನಾಯಕರು ಪೂಜೆ ಹೆಸರಿನಲ್ಲಿ ರಾಜಕೀಯ ನಡೆಯುತ್ತಿರುವುದು ಭಾರೀ ಕುತೂಹಲ ಮೂಡಿಸಿದೆ. ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಶಾಸಕ ಸಿ.ಟಿ. ರವಿ ಶುಕ್ರವಾರ ರಾಷ್ಟ್ರ ದೆಹಲಿಯ ರಾಷ್ಟ್ರೀಯ ಬಿಜೆಪಿ ಕಚೇರಿಯಲ್ಲಿ ತಮ್ಮ ಕಚೇರಿ ಪೂಜೆ ಮಾಡಿದರು. ಈ ಕಾರ್ಯಕ್ರದಲ್ಲಿ ಸಚಿವರಾದ ಅಶೋಕ್, ಗೋವಿಂದ್ ಕಾರಜೋಳ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಹಲವು ಪಾಲ್ಗೊಂಡಿದ್ದಾರೆ.

ಪೂಜೆಯ ಹೆಸರಿನಲ್ಲಿ ರಾಜ್ಯ ಬಿಜೆಪಿ ಮುಖಂಡರು ಹಾಗೂ ಕೇಂದ್ರ ಸಚಿವರು ಒಂದು ಕಡೆ ಸೇರಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಮುಂದಿನ ನಾಯಕ ಹಾಗೂ ಸಚಿವರ ಬಗ್ಗೆ ಚರ್ಚೆ ನಡೆದಿರಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

Edited By : Vijay Kumar
PublicNext

PublicNext

27/11/2020 08:28 pm

Cinque Terre

137.96 K

Cinque Terre

5