ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ಏನೋ ಬೇಜಾರಾಗಿ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾರವಾರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಂತೋಷ್ ಅವರು ಯಾವುದೋ ವೀಡಿಯೋ ಮಾಡಿ ಎಂಎಲ್‍ಸಿಗೆ ಮತ್ತು ಮಿನಿಸ್ಟರ್ ಕೈಗೆ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಇತ್ತು. ಅದನ್ನು ಮಿನಿಸ್ಟರ್ ಮತ್ತು ಎಂಎಲ್‍ಸಿಗೆ ಸೇರಿ ದೆಹಲಿ ನಾಯಕರಿಗೆ ತಲುಪಿಸಿದ್ದಾರೆ ಎನ್ನುವುದು ಮಾಹಿತಿ ಇದೆ ಎಂದರು.
ದೆಹಲಿ ನಾಯಕರಿಗೆ 2-3 ದಿನದ ಹಿಂದೆ ಅವರ ಪರ್ಸನಲ್ ವೀಡಿಯೊ ತೋರಿಸಿದ್ದಾರೆ. ಹೀಗಾಗಿ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು. ಈ ಬಗ್ಗೆ ಸರ್ಕಾರ ತನಿಖೆ ಮಾಡಿದರೆ ಅರ್ಥವಿಲ್ಲ. ಇದರಲ್ಲಿ ಗೌಪ್ಯ ವಿಚಾರ ಅಡಗಿದೆ. ಹೀಗಾಗಿ ಬೇರೆ ತನಿಖೆ ಆಗಬೇಕು. ಸತ್ಯಾಂಶ ಏನಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.
PublicNext
28/11/2020 12:35 pm