ಚಿತ್ರದುರ್ಗ: ಸಾಲ ಮಾಡಿ ಎಲ್ಲ ಭಾಗ್ಯಗಳನ್ನು ಕೊಟ್ಟು ಕರ್ನಾಟಕಕ್ಕೆ ದೌರ್ಭಾಗ್ಯ ತಂದವರೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎಂದು ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಮಾತನಾಡುವ ನೈತಿಕತೆಯನ್ನು ಅವರು ಉಳಿಸಿಕೊಂಡಿಲ್ಲ. 2013ರಲ್ಲಿ ರಾಜ್ಯದ ಸಾಲ 1.31 ಲಕ್ಷ ಕೋಟಿ ರೂ. ಇತ್ತು. 2018ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವಾಗ ಸಾಲದ ಮೊತ್ತ 2.86 ಲಕ್ಷ ಕೋಟಿ ರೂ. ತಲುಪಿತ್ತು. ರಾಜ್ಯದ ಎಲ್ಲ ಮುಖ್ಯಮಂತ್ರಿಗಳು ಮಾಡಿದ ಸಾಲವನ್ನು ದ್ವಿಗುಣಗೊಳಿಸಿದ ಶ್ರೇಯಸ್ಸು ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ಕುಟುಕಿದರು.
PublicNext
28/11/2020 03:15 pm