ಬೆಂಗಳೂರು: ನಾನು ಸಿಎಂ ಆಗಿದ್ದಾಗ ವರ್ಗಾವಣೆ ಹೆಸರಲ್ಲಿ ನಿಖಿಲ್ ಹಣ ಲೂಟಿ ಹೊಡೆದ್ರಾ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ನಗರದ ಪಕ್ಷದ ಕಚೇರಿ ಆವರಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 'ರಾಜ್ಯದಲ್ಲಿ ವರ್ಗಾವಣೆ ಹೆಸರಿನಲ್ಲಿ ಹಣ ಲೂಟಿ ನಡೆಯುತ್ತಿದೆ. ಯಾವ ಪಕ್ಷವೂ ಕೌಟುಂಬಿಕ ರಾಜಕಾರಣದಿಂದ ಹೊರತಾಗಿಲ್ಲ. ಹಾಗಾಗಿ ನೀವು ಟೀಕೆ ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ' ಎಂದು ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಗೆ ಕಿವಿನಾತು ಹೇಳಿದರು.
PublicNext
28/11/2020 10:43 pm