ಮೈಸೂರು: ನಾವು ನಾಯಿಗಳಿಗೆ ಉತ್ತರ ಕೊಡುವ ಅವಶ್ಯಕತೆಯೇ ಇಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಕಿಡಿಕಾರಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ವಾಟಾಳ್ ನಾಗರಾಜ್ ಹಾಗೂ ಸಾ.ರಾ ಗೋವಿಂದ್ ನೇತೃತ್ವದಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ಇಂದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಸಿಎಂ ಯಡಿಯೂರಪ್ಪನವರೇ ನೀವು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದೀರಿ. ನಿಮಗೆ ಕನ್ನಡದ ಬಗ್ಗೆ ಯಾವುದೇ ಅಭಿಮಾನವಿಲ್ಲ. ಮರಾಠಾ ಪ್ರಾಧಿಕಾರ ರಚನೆ ಆದೇಶ ಹಿಂಪಡೆಯದಿದ್ದರೆ ಕರ್ನಾಟಕ ಬಂದ್ ಅನಿವಾರ್ಯ ಎಂದು ಎಚ್ಚರಿಸಿದರು.
ರೇಣುಕಾಚಾರ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಭಟನೆಕಾರರ ವಿರುದ್ಧವಾಗಿ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿದ ವಾಟಾಳ್ ನಾಗರಾಜ್, ಈ ಇಬ್ಬರು ಯಾರು ಎಂದು ಅರ್ಥವಾಗಿಲ್ಲ. ಮಿನಿಸ್ಟರ್ಗಳು, ಎಂಪಿಗಳು ಸುಮ್ಮನಿರುವಾಗ ಮಾತನಾಡಲು ಇವರು ಯಾರು? ಇವರಿಬ್ಬರು ಯಾರು ಅಂತ ನನಗೆ ಗೊತ್ತಿಲ್ಲ. ಅದಕ್ಕೆ ಅವರಿಗೆ ನಾಯಿಗಳು ಎಂದು ಹೆಸರಿಟ್ಟಿದ್ದೇನೆ. ನಾಯಿಗಳು ಬೊಗಳಿದರೆ ಜನರು ಉತ್ತರ ಕೊಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
PublicNext
29/11/2020 06:55 pm