ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಕೃಷಿ ಕಾಯ್ದೆ ರೈತರಿಗೆ ಅನೇಕ ಅವಕಾಶ ತೆರೆದಿಟ್ಟಿದೆ'

ನವದೆಹಲಿ: ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಕೃಷಿ ಕಾಯ್ದೆ ರೈತರಿಗೆ ಹಲವು ಅವಕಾಶಗಳನ್ನು ತೆರೆದಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದಿನ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ಕಾಯ್ದೆಯಿಂದ ಕೃಷಿ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ರೈತ ಸಮುದಾಯಕ್ಕೆ ಅವಕಾಶಗಳು ಮತ್ತಷ್ಟು ಹೆಚ್ಚಾಗಲಿವೆ. ಅಷ್ಟೇ ಅಲ್ಲದೆ ರೈತರಿಗೆ ಹೊಸ ಆಯ್ಕೆಗಳ ಬಾಗಿಲುಗಳು ತೆರೆಯಲಿವೆ. ರೈತರ ಅಭಿವೃದ್ಧಿ ಮತ್ತು ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡೇ ಈ ಕಾಯ್ದೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಯುವಜನರು, ವಿಶೇಷವಾಗಿ ಕೃಷಿಯ ಕುರಿತಾಗಿ ಅಧ್ಯಯನ ಮಾಡಿದವರು ಹತ್ತಿರದ ಹಳ್ಳಿಗಳಿಗೆ ಹೋಗಿ ಆಧುನಿಕ ಕೃಷಿ ಮತ್ತು ಹೊಸ ಕೃಷಿ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಮನವಿ ಮಾಡಿದರು. ಕೇಂದ್ರ ಸರ್ಕಾರವು ಡಿಸೆಂಬರ್ 3ರಂದು ರೈತ ಸಂಘಗಳೊಂದಿಗೆ ಮಾತುಕತೆ ನಡೆಸಲಿದೆ. ಅದಕ್ಕೂ ಮುನ್ನ ಚರ್ಚೆ ನಡೆಸಲು ಬಯಸಿದರೆ ಅವರು ತಮ್ಮ ಪ್ರತಿಭಟನೆಯನ್ನು ನಿಲ್ಲಿಸಲಿ ಎಂದರು.

Edited By : Vijay Kumar
PublicNext

PublicNext

29/11/2020 07:26 pm

Cinque Terre

91.78 K

Cinque Terre

7

ಸಂಬಂಧಿತ ಸುದ್ದಿ