ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಬಿಗ್ ಫೈಟ್ ನಡೆದಿರುವುದು ಗೊತ್ತಿರುವ ವಿಚಾರ. ಶಾಸಕಿ ಹೆಬ್ಬಾಳ್ಕರ್ ಅವರನ್ನ ಸೋಲಿಸಲು ಸಚಿವರು ಈಗಲೇ ಭರ್ಜರಿ ತಯಾರಿ ನಡೆಸಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಆಪರಷೇನ್ ಕಮಲ ನಡೆದು ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂತು. ಅದೇ ರೀತಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಆಪರೇಷನ್ ಕಮಲ ಆರಂಭವಾಗಿದೆ. ಬೆಳಗಾವಿ ತಾಲೂಕಿನ ಸಾಂಬ್ರಾ ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣ ಅನಗೋಳ್ಕರ್ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಜತೆಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೃಷ್ಣ ಅನಗೋಳ್ಕರ್, ರಮೇಶ್ ಜಾರಕಿಹೊಳಿ ಅವರ ಆಶೀರ್ವಾದ ನಮ್ಮ ಮೇಲಿದ್ದು, ಮುಂಬರುವ ಲೋಕಸಭಾ ಬೈ ಎಲೆಕ್ಷನ್‌ಗೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ. ಗ್ರಾಮೀಣ ಕ್ಷೇತ್ರದಲ್ಲೇ ಇನ್ನೂ ಇನ್ನೂರಕ್ಕೂ ಅಧಿಕಮುಖಂಡರು ರಾಜೀನಾಮೆ ನೀಡಿ ಬಿಜೆಪಿಗೆ ಬರಲಿದ್ದಾರೆ. ಇದರ ಜತೆಗೆ ಬೆಳಗಾವಿ ಜಿಲ್ಲೆಯ ಪ್ರಮುಖ ಮುಖಂಡರು ಕೂಡ ಕೈ ಬಿಡಲಿದ್ದು, ಅವರೆಲ್ಲರೂ ಆದಷ್ಟು ಬೇಗ ಬಿಜೆಪಿಯತ್ತ ಮುಖ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
PublicNext
29/11/2020 10:57 pm