ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೈ ಬಿಟ್ಟ ನಟಿ ಶಿವಸೇನೆಗೆ ಎಂಟ್ರಿ

ಮುಂಬಯಿ: ನಟಿ ಊರ್ಮಿಳಾ ಮಂಗಳವಾರ ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ.

ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿಸಂಬರ್ 1 ರಂದು ಶಿವಸೇನೆಗೆ ತೆಕ್ಕೆ ಸೇರಲಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು.

ಊರ್ಮಿಳಾ ಹೆಸರನ್ನು ರಾಜ್ಯಪಾಲರ ಕೋಟಾದಿಂದ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ಶಿವಸೇನೆಯು ಗವರ್ನರ್ ಬಿ ಎಸ್ ಕೊಶ್ಯರಿಗೆ ಕಳುಹಿಸಲಾಗಿದೆ.

ಇತರ 11 ಜನರ ಹೆಸರನ್ನು ರಾಜ್ಯಪಾಲರ ಕೋಟಾದಿಂದ ನಾಮನಿರ್ದೇಶನ ಮಾಡಲು ಮೂರು ಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ರವಾನಿಸಿದೆ.

ಈ 12 ಮಂದಿ ಪಟ್ಟಿಯನ್ನು ರಾಜ್ಯಪಾಲರೂ ಇನ್ನೂ ಅಂಗೀಕರಿಸಬೇಕಿದೆ.

Edited By : Nirmala Aralikatti
PublicNext

PublicNext

30/11/2020 08:24 am

Cinque Terre

53.59 K

Cinque Terre

2

ಸಂಬಂಧಿತ ಸುದ್ದಿ