ಬೆಂಗಳೂರು: ರೆಸ್ಟ್‌ಗಾಗಿ ಒಂದು ತಿಂಗಳು ಆಸ್ಪತ್ರೆಗೆ ಸೇರಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಂತೋಷ್ ತನ್ನ ವಿರುದ್ಧ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಕಿಡಿಕಾರಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಸಂತೋಷ್ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ಸೋತಿದಕ್ಕೆ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಇದು ಮೊದಲ ಬಾರಿಗೆ ಈ ಆರೋಪ ಅಲ್ಲ. ತನಿಖಾ ಸಂಸ್ಥೆ ದಾಳಿ ಮಾಡಿದಾಗಲೂ ಇದೇ ರೀತಿ ಆರೋಪ ಮಾಡುತ್ತಾರೆ' ಎಂದು ವಾಗ್ದಾಳಿ ನಡೆಸಿದರು.
ತಾವು ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಸ್ಪಷ್ಟನೆ ನೀಡಿದ ಸಂತೋಷ್, 'ನಿದ್ರೆ ಬರದೆ ಇದ್ದಾಗ ಮಾತ್ರೆ ತೆಗೆದುಕೊಳ್ಳುತ್ತಾ ಇದ್ದೆ. ಈ ಮಾತ್ರೆಯಲ್ಲಿ ಬದಲಾವಣೆ ಆಗಿದ್ದರಿಂದ ಈ ರೀತಿ ಆಗೋಯ್ತು. ಸಿಎಂ ಯಡಿಯೂರಪ್ಪ ಅವರ ಬಗ್ಗೆ ಮಾತನಾಡಬೇಡಿ. ನಾನು ಗಟ್ಟಿಯಾಗಿದ್ದೀನಿ ನನಗೆ ಯಾವುದೇ ತೊಂದರೆ ಆಗಿಲ್ಲ. ನಾನು ಮಾನಸಿಕವಾಗಿ ದೃಢವಾಗಿ ಇದ್ದೀನಿ. ಇನ್ನೆರಡು ದಿನ ಬಿಟ್ಟು ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇನೆ' ಎಂದು ಹೇಳಿದರು.
PublicNext
30/11/2020 02:38 pm