ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ರೆಸ್ಟ್ ತೆಗೆದುಕೊಳ್ಳೋಣ ಬಿಡಿ'

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಹಾಗೂ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಹೇಳಿದಂತೆ ರೆಸ್ಟ್ ತೆಗೆದುಕೊಳ್ಳೋಣ ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಮೊದಲು ಡಿ.ಕೆ.ಶಿವಕುಮಾರ್, ಸಂತೋಷ್‌ರವರು ಯಾವುದೋ ವಿಡಿಯೋ ಮಾಡಿ ಎಂಎಲ್‍ಸಿಗೆ ಮತ್ತು ಮಿನಿಸ್ಟರ್ ಕೈಗೆ ಕೊಟ್ಟಿದ್ದಾರೆ. ಅದನ್ನು ಮಿನಿಸ್ಟರ್ ಮತ್ತು ಎಂಎಲ್‍ಸಿಗೆ ಸೇರಿ ದೆಹಲಿ ನಾಯಕರಿಗೆ ತಲುಪಿಸಿದ್ದಾರೆ ಎನ್ನುವ ಮಾಹಿತಿ ಇದೆ. ದೆಹಲಿ ನಾಯಕರಿಗೆ 2ರಿಂದ 3 ದಿನದ ಹಿಂದೆ ಅವರ ಪರ್ಸನಲ್ ವಿಡಿಯೋ ತೋರಿಸಿದ್ದಾರೆ. ಹೀಗಾಗಿ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಹೇಳಿದ್ದರು.

ಡಿಕೆ ಶಿವಕುಮಾರ್ ಅವರ ಈ ಹೇಳಿಕೆಗೆ ಟಾಂಗ್ ನೀಡಿದ್ದ ಸಂತೋಷ್‌ ಕುಮಾರ್, 'ರೆಸ್ಟ್ ತೆಗೆದುಕೊಳ್ಳಲು ಡಿಕೆ ಶಿವಕುಮಾರ್ ಆಸ್ಪತ್ರೆ ಸೇರಿಕೊಳ್ಳಲಿ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, 'ಸಂತೋಷ್ ಯಾಕೆ ಆತ್ಮಹತ್ಯೆಗೆ ಯತ್ನಿಸಿದರು' ಎಂದು ಅವರ ಪತ್ನಿ ಹೇಳಿದ್ದಾರೆ. ತನಿಖೆ ಮಾಡಬೇಕೋ ಬೇಡವೋ ಎಂದು ಪ್ರಶ್ನಿಸಿದರು.

ಪಕ್ಷದ ಆಂತರಿಕ ವಿಚಾರ ಮುಚ್ಚಿಕೊಳ್ಳಲು ಏನು ಬೇಕಾದರೂ ಅವರ ಕೈಯಲ್ಲಿ ಹೇಳಿಸಿಕೊಳ್ಳಲಿ. ಅವರು ಕೇವಲ ಪಿಎ ಅಲ್ಲಾ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ. ಆಯ್ತು ಅವರು ಹೇಳಿದಂತೆ ರೆಸ್ಟ್ ತೆಗೆದುಕೊಳ್ಳೋಣ ಬಿಡಿ ಎಂದು ಟಾಂಗ್ ನೀಡಿದರು.

Edited By : Vijay Kumar
PublicNext

PublicNext

30/11/2020 02:57 pm

Cinque Terre

69.92 K

Cinque Terre

2

ಸಂಬಂಧಿತ ಸುದ್ದಿ