ಲಕ್ನೋ: ದೇವ ದೀಪಾವಳಿ ಹಾಗೂ ಗುರು ನಾನಕ್ ಜಯಂತಿ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದು, ರಾಜ್‍ಘಾಟ್‍ನಲ್ಲಿ ದೇವ ದೀಪಾವಳಿಯಲ್ಲಿ ಪಾಲ್ಗೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೊತೆ ಮೊದಲ ದೀಪವನ್ನು ಬೆಳಗಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿದರು. ಗಂಗಾ ಘಾಟ್ ಪ್ರದೇಶದಲ್ಲಿ ಸುಮಾರು 15 ಲಕ್ಷ ದೀಪಗಳನ್ನು ಬೆಳಗುವ ಮೂಲಕ ಹಬ್ಬವನ್ನು ಆಚರಿಸಲಾಗುತ್ತಿದೆ. ದೀಪೋತ್ಸವದ ಅಂಗವಾಗಿ ಶಾಸ್ತ್ರೀಯ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಇದನ್ನು ಮೋದಿ ಕಣ್ತುಂಬಿಕೊಂಡಿದ್ದಾರೆ.
PublicNext
30/11/2020 09:07 pm