ಬೆಂಗಳೂರು: ಸರ್ಕಾರದಿಂದ ಸಿಗುವ ಸವಲತ್ತು ಹಾಗೂ ಲಭ್ಯ ಸೇವೆಗಳನ್ನು ಪಡೆಯುವುದು ವಿಳಂಬವಾದರೆ ಆ ಕುರಿತು ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಹೀಗಾಗಿ ಈ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗೃತರಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ಅವರು ಕರೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನ.30ರಿಂದ ಡಿ. 5ರವರಗೆ ನಡೆಯುವ ಸಕಾಲ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಸಕಾಲ ಸೇವೆಗಳಲ್ಲಿ ಕೊಂಚ ವ್ಯತ್ಯಯವಾಗಿದೆ. ಅದಕ್ಕೆ ಪುನಃ ಚುರುಕು ನೀಡಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಪಡೆಯಲು ಅನುಕೂಲವಾಗುವಂತೆ ಸಕಾಲ ಸೇವೆಗಳ ಕುರಿತು ಜಾಗೃತಿ ಮೂಡಿಸಲು ಸಪ್ತಾಹ ಆಚರಿಸಲಾಗುತ್ತಿದೆ ಎಂದರು.
PublicNext
01/12/2020 07:44 am