ಬೆಂಗಳೂರು: ಮಾಜಿ ಶಾಸಕ ವೈಎಸ್‌ವಿ ದತ್ತ ಜೆಡಿಎಸ್ ತೊರೆಯುತ್ತಾರೆ ಎಂಬ ಊಹಾಪೋಹಗಳು ಕೇಳಿ ಬಂದಿದ್ದವು. ಇದಕ್ಕೆಲ್ಲ ಸ್ವತಃ ಅವರೇ ಬ್ರೇಕ್ ಹಾಕಿದ್ದಾರೆ.
ಕೆಲವು ದಿನಗಳಿಂದ ಸಕ್ರಿಯ ರಾಜಕಾರಣದಿಂದ ದೂರ ಇರುವ ದತ್ತ ಜೆಡಿಎಸ್ ಪಕ್ಷವನ್ನು ತೊರೆಯುತ್ತಾರೆ ಎಂಬ ಸುದ್ದಿ ಹರಿದಾಡಿದ್ದವು. ಕೆಲವು ಮಾಧ್ಯಮಗಳಲ್ಲೂ ಈ ವರದಿ ಪ್ರಸಾರ ಆಗಿತ್ತು. ಆದರೆ ಸ್ವತಃ ದತ್ತಾ ಅವರೇ ಇದನ್ನು ನಿರಾಕರಣೆ ಮಾಡಿದ್ದಾರೆ. ಈ ಕುರಿತಾಗಿ ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಸ್ಪಷ್ಟೀಕರಣ ನೀಡಿರುವ ಅವರು, ಸೋಮವಾರ ರಾತ್ರಿ ಎಚ್‌ಡಿ ದೇವೇಗೌಡರ ಮನೆಗೆ ಹೋಗಿ ಅವರ ಆರೋಗ್ಯ ವಿಚಾರಿಸಿಕೊಂಡು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳ ಬಗ್ಗೆ ಮಾತನಾಡಿಕೊಂಡು ಬಂದಿದ್ದೇನೆ. ನನ್ನ ತಲೆಯಲ್ಲಿ ಇದುವರೆಗೂ ಇಲ್ಲದ ಆಲೋಚನೆಯನ್ನು ಟಿವಿ ಅವರು ಸುದ್ದಿಯಾಗಿ ಪ್ರಸಾರ ಮಾಡಿದ್ದಾರೆ. ಸುದ್ದಿಯನ್ನು ಇವರೇ ಸೃಷ್ಟಿಸಿ ಪ್ರಸಾರ ಮಾಡುವ ಮುನ್ನ ನಮ್ಮದೊಂದು ಪ್ರತಿಕ್ರಿಯೆ ಕೇಳಬೇಕಲ್ಲವೇ ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
PublicNext
01/12/2020 11:57 am